
ಕಾರವಾರ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಬಾಲಕಿಯರ ಬಲಾಮಂದಿರದಲ್ಲಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತಂದೆ ಇಲ್ಲದ ಕಾರಣ ಬಾಲಕಿ ಬಾಲಮಂದಿರದಲ್ಲಿ ಇದ್ದು ಓದುತ್ತಿದ್ದಳು. ಇದೀಗ ವಿದ್ಯಾರ್ಥಿನಿ ಏಕಾಏಕಿ ಸಾವಿಗೆ ಶರಣಾಗಿದ್ದಾಳೆ.
ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.