ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಇಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ನಡೆದಿದೆ. ಮಾರ್ಚ್ 9ರಂದು ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ತಮಿಳುನಾಡು ಮೂಲದ ಶಿವಶ್ರೀ ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಎರಡೂ ಕುಟುಂಬದವರ ನಡುವೆ ಮಾತುಕತೆ ನಡೆದು ಮದುವೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರ ಮದುವೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್ ಸಂತೋಷ್ ಜೀ ರವರು, ಶ್ರೀ ವಿನಯ್ ಗುರೂಜಿ ರವರು ಭಾಗಿಯಾಗಿದ್ದರು ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರ ಮದುವೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್ ಸಂತೋಷ್ @blsanthosh ಜೀ ರವರು ಹಾಗೂ ಖ್ಯಾತ ಇತಿಹಾಸಕಾರರಾದ ಡಾ. ವಿಕ್ರಮ್ ಸಂಪತ್ @vikramsampath ರವರೊಂದಿಗೆ. pic.twitter.com/wGkzdFiqlP
— Prathap Simha (@mepratap) March 6, 2025