
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಹಿಂಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯುವ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ರಿಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಕಾರಣ ಕೇಳಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಗಿರೀಶ್ ಭಾರದ್ವಾಜ್ ಹಾಗೂ ಶ್ರೀಧರ್ ಎನ್ನುವವರು ಫೆ.16ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ವೆಂಕಟೇಶ್ ದಳವಾಯಿ ರಾಜ್ಯ ಸರ್ಕಾರದ ವಿರುದ್ಧ ವಾದಮಂಡಿಸಲಿದ್ದಾರೆ. ಮಾರ್ಚ್ 17ರಂದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ.