
ದಾವಣಗೆರೆ: 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿದ್ದು, ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು.
ನಗರದ ಎಲ್ಲಾ ಬಡಾವಣೆಗಳಲ್ಲಿ ಉಪನೋಂದಣಾಧಿಕಾರಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆಯಾಗದೇ ಇರುವುದರಿಂದ ಪಾಲಿಕೆ ವ್ಯಾಪ್ತಿಯ ವಸತಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.