
ಬೆಂಗಳೂರು: ರಾಜ್ಯದಲ್ಲಿ ಸಿಎಸ್ಆರ್ ನಿಧಿ ನೆರವಿನಲ್ಲಿ 500, ಏಷ್ಯಾ ಅಭಿವೃದ್ಧಿ ಬ್ಯಾಂಕ್ ನಿಧಿಯ ನೆರವಿನಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೆಪಿಎಸ್ ಶಾಲೆಗಳ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಾರಿಗೆ ಸೌಲಭ್ಯ ಒದಗಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಜೂರಾಗಿದ್ದ ಕೆಪಿಎಸ್ ಶಾಲೆಗೆ ಟೆಂಡರ್ ಪ್ರಕ್ರಿಯೆ ನಂತರ ಅನುದಾನ ಹಿಂಪಡೆದಿರುವುದಕ್ಕೆ ಬಿಜೆಪಿ ಸದಸ್ಯ ಸುರೇಶ ಗೌಡ ತೀವ್ರ ಸಮಾಧಾನ ವ್ಯಕ್ತಪಡಿಸಿದ್ದು, ಅಧಿವೇಶನ ಮುಗಿಯುವುದರೊಳಗೆ ಅನುದಾನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.