
ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಿಗೂ ಬಿ ಖಾತಾ ನೀಡುವ ಕುರಿತಂತೆ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ನಗರ, ಪಟ್ಟಣ ಪ್ರದೇಶಗಳಲ್ಲಿ ಅನಧಿಕೃತ ಆಸ್ತಿಗಳಿಗೆ ಬಿ ಖಾತಾ ನೀಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಿಗೂ ಬಿ ಖಾತಾ ನೀಡುವ ಉದ್ದೇಶದಿಂದ ಕಾಯ್ದೆ ತಿದ್ದುಪಡಿಗೆ ಕರಡು ಮಸೂದೆ ಸಿದ್ಧವಾಗಿದ್ದು, ಪರಿಶೀಲನೆ ಹಂತದಲ್ಲಿದೆ.
ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ವ್ಯಾಪ್ತಿಯಲ್ಲಿರುವ ಅನಧಿಕೃತ ನಿವೇಶನ, ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ಬಿ ಖಾತಾ ಮಾಡಿಕೊಡಲಾಗುತ್ತಿದ್ದು, ಇದೇ ಮಾದರಿಯಲ್ಲಿ, ಗ್ರಾಪಂ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ಮಾಡಿಕೊಡಲಾಗುವುದು ಎಂದು ಹೇಳಲಾಗಿದೆ.