
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ನಿರೀಕ್ಷೆಗಳು ಹೆಚ್ಚಿವೆ.
ಬಜೆಟ್ ಮಂಡನೆಗೆ ವಿಪಕ್ಷ ಬಿಜೆಪಿ ಪ್ರತಿಭಟನೆ ಮೂಲಕ ವಿರೋಧ ವ್ಯಕ್ತಪಡಿಸಲು ಮುಂದಾಗಿದೆ. ಇದು ಅಭಿವೃದ್ಧಿ ಶೂನ್ಯ ಸರ್ಕಾರ, ಅನುದಾನ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪ್ರತಿಭಟನೆ ಮೂಲಕ ಅಧಿವೇಶಕ್ಕೆ ತೆರಳಲು ಸಜ್ಜಾಗಿದ್ದಾರೆ.