alex Certify BUDGET BREAKING : ರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್ ಗಾತ್ರ 4.09 ಲಕ್ಷ ಕೋಟಿ |Karnataka Budjet 2025 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING : ರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್ ಗಾತ್ರ 4.09 ಲಕ್ಷ ಕೋಟಿ |Karnataka Budjet 2025

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಕ್ಷಣಗಣನೆ ಆರಂಭವಾಗಿದೆ.

ಪ್ರಸಕ್ತ ಸಾಲಿನ ಬಜೆಟ್ ಗಾತ್ರ 4.09 ಲಕ್ಷ ಕೋಟಿ ಎಂದು ಹೇಳಲಾಗಿದೆ. ಬಜೆಟ್ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ನಂತರ ಬಜೆಟ್ ಪ್ರತಿ ಇರುವ ಸೂಟ್ ಕೇಸ್ ಪ್ರದರ್ಶಿಸಿದ್ದಾರೆ.
ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ.

ಈಗಾಲೇ ಸಿಎಂ ಕಾವೇರಿ ನಿವಾಸದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಬಸವರಾಜ್ ರಾಯರೆಡ್ದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿ ಬಜೆಟ್ ಮಂಡನೆಗೆ ಶುಭಕೋರಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರತಿ ಪ್ರದರ್ಶಿಸಿದರು. ಬಳಿಕ ವಿಧಾನಸೌಧಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಲಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...