ಬೆಂಗಳೂರು : ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ.