ಬೆಂಗಳೂರು : ರಾಜ್ಯದ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸಿನಿಮಾಗೆ 200 ರೂ.ದರ ನಿಗದಿಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವೈಶಿಷ್ಠ್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.