ಬೆಂಗಳೂರು : ಕರ್ನಾಟಕದಲ್ಲಿ ಹೊಸದಾಗಿ 500 ಪಬ್ಲಿಕ್ ಶಾಲೆಗಳು ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
50 ಪ್ರೌಢ ಶಾಲೆಗಳು ಉನ್ನತರೀಕರಣ ಮಾಡುವುದಾಗಿ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನೂ ಬೆಂಗಳೂರು ಟನಲ್ ರಸ್ತೆಗೆ 40 ಸಾವಿರ ಕೋಟಿ ರೂ. ಯೋಜನೆ ಹಂಚಿಕೆ ಮಾಡಿದ್ದಾರೆ.
ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.