ಬೆಂಗಳೂರು : ತೊಗರಿ ಬೆಳೆಗಾರರಿಗೆ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ಸಿಕ್ಕಿದ್ದು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದೆ.
ತೊಗರಿ ಕ್ವಿಂಟಾಲ್ ಗೆ 7550 ರೂ ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ ಪ್ರೋತ್ಸಾಹಧನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ.