
ಬೆಂಗಳೂರು: ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು.
ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.