ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 5267 ಶಿಕ್ಷಕರ ಹುದ್ದೆಗಳ ಭರ್ತಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.