ಬೆಂಗಳೂರು : ರಾಜ್ಯ ಸರ್ಕಾರದಿಂದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿವಿಧ ಯೋಜನೆಗಳು, ಹೊಸ ಬಂಡವಾಳ ಆಕರ್ಷಿಸುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ.
ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು.
ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್ರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.ʻಗೃಹ ಆರೋಗ್ಯʼ ಯೋಜನೆಯಡಿ 2024-25 ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.