ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ, ವೈದ್ಯಕೀಯ ಕ್ಷೇತ್ರಕ್ಕೆ, ಕೃಷಿಗೆ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..ಇಲ್ಲಿದೆ ಸಂಪೂರ್ಣ ಮಾಹಿತಿ.
ಹೀಗಿದೆ ಕರ್ನಾಟಕ ಬಜೆಟ್ ನ ಹೈಲೆಟ್ಸ್
• ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದ ಯೋಜನೆ ಜಾರಿ
• ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ
• 26 ಸರ್ಕಾರಿ ಮಹಿಳಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹301 ಕೋಟಿ ಅನುದಾನ. ಹೊಸದಾಗಿ ಪ್ರಾರಂಭಿಸಿದ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ₹10 ಕೋಟಿ ನೆರವು
• 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು.
• ಸಿಎಂ ಸಿದ್ದರಾಮಯ್ಯ, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ ಮಕ್ಕಳಿಗೂ ಪ್ರೋತ್ಸಾಹ ಧನ ನೀಡುವುದಗೈ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು ಎಂದರು.ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.
• Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು ಎಂದರು.
• ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್ರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.
ʻ• ಗೃಹ ಆರೋಗ್ಯʼ ಯೋಜನೆಯಡಿ 2024-25 ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು.ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವುದರ ಮೂಲಕ ʻಆರೋಗ್ಯ ಕವಚʼ ಸೇವೆಯನ್ನು ಬಲಪಡಿಸಲಾಗುವುದು.
ಸಾಂಕ್ರಾಮಿಕ ರೋಗಗಳಾದ ಚಿಕೂನ್ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಕಾಡಿನ ಖಾಯಿಲೆಗಳ (KFD) ಪರಿಣಾಮಕಾರಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು.ಶ್ರವಣ ಸಂಜೀವಿನಿʼ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣದೋಷವನ್ನು ಆರಂಭದಲ್ಲಿಯೇ ಗುರುತಿಸಿ ಕಾಕ್ಲಿಯರ್ ಇಂಪ್ಲಾಂಟ್ (Cochlear Implant) ಶಸ್ತ್ರ ಚಿಕಿತ್ಸೆ ಹಾಗೂ ಇಂಪ್ಲಾಂಟ್ಗಳ ಬಿಡಿಭಾಗಗಳ ನಿರ್ವಹಣೆ, ದುರಸ್ತಿ ಮತ್ತು ಬದಲಾವಣೆ ಮಾಡಲು 12 ಕೋಟಿ ರೂ. ಒದಗಿಸಲಾಗುವುದು.
• ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1000 ರೂ, ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1000 ರೂ ಹೆಚ್ಚಳ ಹಾಗೂ ಸಹಾಯಕಿಯರ ಗೌರವಧನ 700 ರೂಗೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.
ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?
ಕೃಷಿ ಕ್ಷೇತ್ರ, ರೈತರಿಗೆ ರಾಜ್ಯ ಬಜೆಟ್ ನಲ್ಲಿ ಮಹತ್ವದ ಕೊಡುಗೆಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮೊದಲು ಸರ್ವಕ್ಕೆ ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು ಎಂಬ ಕುಮಾರವ್ಯಾಸನ ಸಾಲುಗಳನ್ನು ಉಲ್ಲೇಖಿಸುವ ಮೂಲಕ ರಾಜ್ಯದ ಕೃಷಿ ಕ್ಷೇತ್ರಗಳಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದರು.
* ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.
* 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
* ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.
* ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ,
ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು88 ಕೋಟಿ ರೂ. ಒದಗಿಸಲಾಗುವುದು.
* ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
* ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ
ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000 ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.
* ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
* ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.
* ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಕ್ಕೆ ತರಲಾಗುವುದು.
* ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.
* ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.
* . ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.
* ಜೈವಿಕ ಕೃಷಿ ಪರಿಕರ ಸ್ಟಾರ್ಟ್-ಅಪ್ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.
* ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.
* ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶುಲ್ಕದಲ್ಲಿ ಶೇ.50ರಷ್ಟು ಮರುಪಾವತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಕೆಇಎ ಮೂಲಕ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
* ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು.
* ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.
* ತೊಗರಿ ಬೆಳೆಗಾರರಿಗೆ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ಸಿಕ್ಕಿದ್ದು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದೆ.ತೊಗರಿ ಕ್ವಿಂಟಾಲ್ ಗೆ 7550 ರೂ ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ ಪ್ರೋತ್ಸಾಹಧನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
* ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ರಾಜ್ಯದ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸಿನಿಮಾಗೆ 200 ರೂ.ದರ ನಿಗದಿಗೊಳಿಸಿದೆ.
* ರಾಜ್ಯ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
* ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಎತ್ತಿನ ಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮಧುಗಿರಿ 45, ಕೊರಟಗೆರೆಯಲ್ಲಿ 62 ಕೆರೆ ತುಂಬಿಸುವ ಗುರಿ ಹೊಂದಲಾಗಿದೆ. ಅಂತರ್ಜಲ ಹೆಚ್ಚಿಸಲು ಯೋಜನೆಗಳನ್ನುಅನುಷ್ಠಾಗೊಳಿಸಲಾಗುವುದು.1080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೊಳಿಸಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ ಕೈಗೊಳ್ಳಲಾಗುವುದು ಎಂದರು.
* ಕರ್ನಾಟಕದಲ್ಲಿ ಹೊಸದಾಗಿ 500 ಪಬ್ಲಿಕ್ ಶಾಲೆಗಳು ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 50 ಪ್ರೌಢ ಶಾಲೆಗಳು ಉನ್ನತರೀಕರಣ ಮಾಡುವುದಾಗಿ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನೂ ಬೆಂಗಳೂರು ಟನಲ್ ರಸ್ತೆಗೆ 40 ಸಾವಿರ ಕೋಟಿ ರೂ. ಯೋಜನೆ ಹಂಚಿಕೆ ಮಾಡಿದ್ದಾರೆ.
* ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
* ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.ವಾರದಲ್ಲಿ 2 ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತದೆ. ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
* ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾಸಿಕ ಗೌರವಧನ 2 ಸಾವಿರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
* ಬೆಂಗಳೂರಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು, ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
* ಎಪಿಎಂಸಿಗಳಲ್ಲಿ ನೋಂದಾಯಿತ ಕಾರ್ಮಿಕರಿಗೆ ವಿಮಾ ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.
* ಮೇಕೆದಾಟು ಯೋಜನೆಯ ಪೂರ್ವ ಯೋಜನೆ ಅಂತಿಮಗೊಂಡಿದ್ದು, ಕೇಂದ್ರದ ಅನುಮೋದನೆಗಾಗಿ ಕಾಯಲಾಗುತ್ತಿದೆ: ಸಿಎಂ
* ಎತ್ತಿನಹೊಳೆ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ತುಂಬಿಸುವ ಯೋಜನೆಯನ್ನು 553 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
* ಹೊಸ ಪಬ್ಲಿಕ್ ಶಾಲೆಗಳನ್ನು ತೆರೆಯುವ ಮೂಲಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಜಾಲವನ್ನು ವಿಸ್ತರಿಸಲಾಗುವುದು ಎಂದು ಸಿಎಂ ಘೋಷಿಸಿದರು.
* ಪುತ್ತೂರಿನ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಮತ್ತು ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು.
* ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಅಡುಗೆ ಸಲಕರಣೆಗಳನ್ನು ಖರೀದಿಸಲು ಒಟ್ಟು 46 ಕೋಟಿ ರೂ.
* ಫಿಲ್ಮ್ ಸಿಟಿ ಸ್ಥಾಪನೆಗೆ 500 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
* ವಿಶ್ವಬ್ಯಾಂಕ್ ನೆರವಿನ ಬಹುಮಾನ ಯೋಜನೆಯಡಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ ಸಮೀಕ್ಷೆ ನಡೆಸಲಾಗುವುದು
* ತೊಗರಿ (ಪಾರಿವಾಳ ಬಟಾಣಿ) ಕೃಷಿಯಲ್ಲಿ ಸರ್ಕಾರ ಹೊಸ ತಂತ್ರಜ್ಞಾನವನ್ನು ಜಾರಿಗೆ ತಂದಿದೆ ಮತ್ತು 5,000 ಹೊಸ ಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ಪ್ರಾರಂಭಿಸಿದೆ. ಇದಲ್ಲದೆ, ಜೊಯಿಡಾ ತಾಲ್ಲೂಕನ್ನು ರಾಜ್ಯದ ಮೊದಲ ಸಾವಯವ ತಾಲ್ಲೂಕು ಎಂದು ಘೋಷಿಸಲಾಗಿದೆ
* ಪ್ರವರ್ಗ 2ಎ ಮತ್ತು 2ಬಿ ಸೇರಿದಂತೆ ರಾಜ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಗುತ್ತಿಗೆದಾರರಿಗೆ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
* ಈ ಹಣಕಾಸು ವರ್ಷದಲ್ಲಿ ಐದು ಖಾತರಿ ಯೋಜನೆಗಳಿಗೆ 51,034 ಕೋಟಿ ರೂ.
* 2025-26ನೇ ಸಾಲಿಗೆ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50,000 ರೈತರಿಗೆ ಬೆಂಬಲ ನೀಡಲು 428 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
* ಈ ಹಿಂದೆ ರೈತರ ಕಲ್ಯಾಣ ಯೋಜನೆಗೆ 44,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿತ್ತು, ಈ ಬಾರಿ ಹಂಚಿಕೆಯನ್ನು 51,331 ಕೋಟಿ ರೂ.ಗೆ ಹೆಚ್ಚಿಸಲಾಗಿದ
* 20 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ನೀತಿಗಳನ್ನು ಪರಿಚಯಿಸಿದೆ.
* ಕರ್ನಾಟಕದ ಆರ್ಥಿಕ ಬೆಳವಣಿಗೆ ರಾಷ್ಟ್ರೀಯ ಸರಾಸರಿಯನ್ನು ಮೀರಿದ್ದು, ದೇಶದ ಜಿಡಿಪಿಗೆ ಕರ್ನಾಟಕ ಶೇ.8.4ರಷ್ಟು ಕೊಡುಗೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ.
ಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನಮಗಿದೆ.
2025-26ನೇ ಸಾಲಿನ ನಮ್ಮ ಬಜೆಟ್ನ ಮುಖ್ಯಾಂಶಗಳಿವು… pic.twitter.com/V4zKk4f8wc
— DIPR Karnataka (@KarnatakaVarthe) March 7, 2025
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ.
ಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನಮಗಿದೆ.
2025-26ನೇ ಸಾಲಿನ ನಮ್ಮ ಬಜೆಟ್ನ ಮುಖ್ಯಾಂಶಗಳಿವು… pic.twitter.com/5fEBwiT2JF
— DIPR Karnataka (@KarnatakaVarthe) March 7, 2025
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ.
ಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನಮಗಿದೆ.
2025-26ನೇ ಸಾಲಿನ ನಮ್ಮ ಬಜೆಟ್ನ ಮುಖ್ಯಾಂಶಗಳಿವು… pic.twitter.com/qDC1ga3llm
— DIPR Karnataka (@KarnatakaVarthe) March 7, 2025
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ.
ಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನಮಗಿದೆ.
2025-26ನೇ ಸಾಲಿನ ನಮ್ಮ ಬಜೆಟ್ನ ಮುಖ್ಯಾಂಶಗಳಿವು… pic.twitter.com/87npRC4UOr
— DIPR Karnataka (@KarnatakaVarthe) March 7, 2025
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ.
ಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನಮಗಿದೆ.
2025-26ನೇ ಸಾಲಿನ ನಮ್ಮ ಬಜೆಟ್ನ ಮುಖ್ಯಾಂಶಗಳಿವು… pic.twitter.com/oXM2ih5D3J
— DIPR Karnataka (@KarnatakaVarthe) March 7, 2025