alex Certify BUDGET BREAKING: ಜಮೀನುಗಳ ಖಾತೆಗೆ ಇ-ಪೌತಿ ಆದೋಲನ: ಆಸ್ತಿಗಳ ಸರ್ವೆ ಇನ್ಮುಂದೆ ಡಿಜಿಟಲೀಕರಣ; ಡ್ರೋನ್ ಬಳಸಿ ಸರ್ವೆ ಕಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING: ಜಮೀನುಗಳ ಖಾತೆಗೆ ಇ-ಪೌತಿ ಆದೋಲನ: ಆಸ್ತಿಗಳ ಸರ್ವೆ ಇನ್ಮುಂದೆ ಡಿಜಿಟಲೀಕರಣ; ಡ್ರೋನ್ ಬಳಸಿ ಸರ್ವೆ ಕಾರ್ಯ

ಬೆಂಗಳೂರು: ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂದೋಲನವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ವಿಧಾನವಾದ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು.

ಪ್ರಸ್ತುತ ಚಾಲ್ತಿಯಲ್ಲಿರುವ ಕರ್ನಾಟಕ ಭೂ-ಕಂದಾಯ ಕಾಯ್ದೆಯು ತುಂಬ ಹಳೆಯದಾಗಿದ್ದು, ಕ್ಷೇತ್ರ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹೆಚ್ಚಿನ ಸ್ಪಷ್ಟತೆ ನೀಡುವ ಹಿನ್ನೆಲೆಯಲ್ಲಿ ಸಮಗ್ರವಾಗಿ ಅಧ್ಯಯನ ನಡೆಸಿ, ಹೊಸ ಭೂ-ಕಂದಾಯ ಕಾಯ್ದೆ ತರಲಾಗುವುದು.

ರೈತರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಮರ್ಪಕ ಸೌಲಭ್ಯಗಳನ್ನೊಳಗೊಂಡ ಹೊಸ 100 ನಾಡ ಕಛೇರಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಹೊಸದಾಗಿ ರಚನೆಯಾದ 63 ತಾಲ್ಲೂಕುಗಳ ಪೈಕಿ ಒಂಭತ್ತು ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣವಾಗಿದ್ದು, ಐದು ತಾಲ್ಲೂಕುಗಳಲ್ಲಿ ಪ್ರಗತಿಯಲ್ಲಿವೆ. 2024-25ನೇ ಸಾಲಿನಲ್ಲಿ 28 ತಾಲ್ಲೂಕುಗಳಲ್ಲಿ ಪ್ರಜಾಸೌಧಕ್ಕೆ ಅನುಮೋದನೆ ನೀಡಲಾಗಿದೆ. 2025-26ನೇ ಸಾಲಿನಲ್ಲಿ 21 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭೂಮಾಪನ ಇಲಾಖೆಯು ಕೈಗೊಳ್ಳುತ್ತಿರುವ ದೈನಂದಿನ ಸಾಂಪ್ರದಾಯಿಕ ಸರ್ವೆ ಕಾರ್ಯಗಳನ್ನು ಸಂಪೂರ್ಣವಾಗಿ ಆಧುನಿಕ ತಂತ್ರಜ್ಞಾನ ಬಳಸಿ ಡಿಜಿಟಲೀಕರಿಸಿ ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆಯನ್ನು ಒದಗಿಸಲಾಗುವುದು.

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ʻನಕ್ಷಾʼ ಯೋಜನೆಯಡಿಯಲ್ಲಿ ಪ್ರಾರಂಭಿಕವಾಗಿ ರಾಜ್ಯದ 10 ನಗರಸಭೆ / ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳನ್ನು ಡ್ರೋನ್ (Drone) ಬಳಸಿ ಸರ್ವೆ ಮಾಡುವ ಮೂಲಕ ಡಿಜಿಟಲೀಕರಿಸಲಾಗುವುದು.

ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಸೇವೆಯನ್ನು ನೀಡಲು ಸಕಾಲ ಕಾಯ್ದೆಯಡಿ ಪ್ರಸ್ತುತ ಇರುವ ಕಾಲಮಿತಿಯನ್ನು 45 ದಿನಗಳಿಂದ 21 ದಿನಗಳಿಗೆ ಇಳಿಸಲಾಗುವುದು.

ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ತಡೆಯುವಿಕೆ ಕಾರ್ಯಕ್ರಮದಡಿ, 3,500 ಕೋಟಿ ರೂ. ವಿಶ್ವಬ್ಯಾಂಕ್ ಸಾಲ ಹಾಗೂ ರಾಜ್ಯ ಸರ್ಕಾರದ 1,500 ಕೋಟಿ ರೂ. ಸೇರಿ ಒಟ್ಟು 5,000 ಕೋಟಿ ರೂ. ವೆಚ್ಚದಲ್ಲಿ 2025-2031ರ ಅವಧಿಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...