ಕಲಬುರಗಿ : ರಾಜ್ಯದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವೇಗವಾಗಿ ಬಂದ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡು ಬೈಕ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.