HomeKarnatakaBREAKING : ನಟಿ ರನ್ಯಾರಾವ್ 3 ದಿನ 'DRI' ಕಸ್ಟಡಿಗೆ : ಕೋರ್ಟ್ ಆದೇಶ

BREAKING : ನಟಿ ರನ್ಯಾರಾವ್ 3 ದಿನ ‘DRI’ ಕಸ್ಟಡಿಗೆ : ಕೋರ್ಟ್ ಆದೇಶ

ಬೆಂಗಳೂರು : ಅಕ್ರಮ ಚಿನ್ನಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ನಂತರ, ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ನಂತರ ಡಿಆರ್ ಐ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಸದ್ಯ, ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular