ಬೆಂಗಳೂರು : ಕೆಲಸದ ಸ್ಥಳದಲ್ಲಿ ಮೃತಪಡುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರದ ಮೊತ್ತ 8 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲ ಜಿಲ್ಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ ₹750 ಕೋಟಿ ಅನುದಾನ ನೀಡಲಾಗುತ್ತಿದೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದ್ದಲ್ಲಿ ನೀಡುವ Ex-gratia ಮೊತ್ತ ₹1.5 ಲಕ್ಷಕ್ಕೆ ಹೆಚ್ಚಳ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರದ ಮೊತ್ತ 28 ಲಕ್ಷಕ್ಕೆ ಹೆಚ್ಚಳ ಮಾಡಲಾಗುತ್ತಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು ₹5 ಲಕ್ಷಗಳ ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ಹೃದ್ರೋಗ ಮತ್ತು ಕ್ಯಾನ್ಸರ್ ಖಾಯಿಲೆಗಳಿಗೆ ₹5 ಲಕ್ಷ ಹಾಗೂ ಇತರೆ ಖಾಯಿಲೆಗಲಿಗೆ ₹2 ಲಕ್ಷ ವರೆಗೆ ವೈದ್ಯಕೀಯ ವೆಚ್ಚ ಮರುಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.