ಬೆಂಗಳೂರು : ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್ ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ ಎಂದು ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿ.ಎಸ್ ಯಡಿಯೂರಪ್ಪ 16ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ಬಿಟ್ಟರೆ ಸನ್ಮಾನ್ಯ ಮುಖ್ಯಮಂತ್ರಿ siddaramaiah ನವರು ಇಂದು ಮಂಡಿಸಿದ ಬಜೆಟ್ ರಾಜ್ಯದ ಅಭಿವೃದ್ಧಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ತಮ್ಮ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್ ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆಯಾಗಿದೆ. ಬಜೆಟ್ ನಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಧರ್ಮಾಧಾರಿತ ಮೀಸಲಾತಿ ನೀಡುವ ಮೂಲಕ ಸಂವಿಧಾನದ ಸದಾಶಯಗಳನ್ನು ಗಾಳಿಗೆ ತೂರಿರುವುದು, ಸಾಲದ ಹೊರೆ ಹೆಚ್ಚಿಸಿರುವುದು, ಕಲ್ಯಾಣ ಕರ್ನಾಟಕ ಅಭಿವೃದ್ಧಿಯತ್ತ ನಿರ್ಲಕ್ಷ್ಯ, ಕಳೆದ ಬಜೆಟ್ ಘೋಷಣೆಗಳ ಅನುಷ್ಠಾನದ ಬಗ್ಗೆ ಮೌನ, ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಜೆಟ್ ನಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿಲ್ಲ. ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ, ರೈತರಿಗಾಗಿ ಬಜೆಟ್ ನಲ್ಲಿ ಯಾವುದೇ ವಿಶೇಷ ಯೋಜನೆ ನೀಡಿಲ್ಲ. ರೈತರ ಆದಾಯ ಹೆಚ್ಚಳಕ್ಕೆ ಯಾವುದೇ ಕ್ರಮಗಳಿಲ್ಲ. ಸ್ಪಷ್ಟತೆಯಿಲ್ಲದ ಈ ಬಜೆಟ್ ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಎಂದು ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.
16ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ಬಿಟ್ಟರೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @siddaramaiah ನವರು ಇಂದು ಮಂಡಿಸಿದ ಬಜೆಟ್ ರಾಜ್ಯದ ಅಭಿವೃದ್ಧಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ತಮ್ಮ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್ ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆಯಾಗಿದೆ.
ಬಜೆಟ್ ನಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ…
— B.S.Yediyurappa (@BSYBJP) March 7, 2025