
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಇಡಿ ಜಾರಿ ಮಾಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ಇಡಿ ಜಾರಿ ಮಾಡಿದ್ದ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.