
ವಾಷಿಂಗ್ಟನ್: ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ರಷ್ಯಾ-ಉಕ್ರೇನ್ ನಿಲ್ಲಿಸಬೇಕು. ರಷ್ಯಾ, ಉಕ್ರೇನ್ ಯುದ್ಧ ನಿಲ್ಲಿಸದಿದ್ದರೆ ಮೂರನೇ ವಿಶ್ವ ವಿವಿಧ ನಡೆಯುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾ ಯುದ್ಧದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಡೊನಾಲ್ಡ್ ಟ್ರಂಪ್ ಕೂಡಲೇ ರಷ್ಯಾ ಮತ್ತು ಉಕ್ರೇನ್ ಯುದ್ಧವನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಯುದ್ಧದಿಂದ ಯಾವುದೇ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಶಾಂತಿ, ಸಂಧಾನ ಮಾತುಕತೆಯಿಂದ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಎರಡೂ ದೇಶಗಳು ಹೆಜ್ಜೆ ಇಡಬೇಕು ಎಂದು ಡೊನಾಲ್ಡ್ ಟ್ರಂಪ್ ಸಲಹೆ ನೀಡಿದ್ದಾರೆ.
ಉಭಯ ದೇಶಗಳ ಯುದ್ಧ ಮೂರನೇ ಮಹಾಯುದ್ಧಕ್ಕೆ ನಾಂದಿಯಾಗಲಿದೆ. ಹೀಗಾಗಿ ಕೂಡಲೇ ಯುದ್ಧ ನಿಲ್ಲಿಸಿ ಶಾಂತಿ ಸಂಧಾನಕ್ಕೆ ಮುಂದಾಗಬೇಕು ಎಂದು ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರಿಗೆ ಡೊನಾಲ್ಡ್ ಟ್ರಂಪ್ ಮನವಿ ಮಾಡಿದ್ದಾರೆ.