
ಬೆಂಗಳೂರು: ಬಿಜೆಪಿ ನಾಯಕ ಶ್ರೀರಾಮುಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೇ ವೇಳೆ ಜನಾರ್ಧನ ರೆಡ್ಡಿ, ಅಮಿತ್ ಶಾ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಅಮಿತ್ ಶಾ ಭೇಟಿಗೆ ಬಯಸಿದ್ದ ಶ್ರೀರಾಮುಲು ತಮ್ಮ ಅಸಮಾಧಾನ ಹೊರಹಾಕಲು ಯತ್ನಿಸಿದ್ದರು. ಆದರೆ ಶ್ರೀರಾಮುಲು ಅವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಆದರೆ ಜನಾರ್ಧನ ರೆಡ್ಡಿ ಅಮಿತ್ ಶಾ ಭೇಟಿಯಾಗಿ ಚರ್ಚೆ ನಡೆಸಿರುವುದು ಬಳ್ಳಾರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಕರ್ನಾಟಕ ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಜೊತೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.