
ಕೊಪ್ಪಳ: ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ, ಕಾಮುಕರು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧ ಕೊಪ್ಪಳ ಪೊಲೀಸತು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲ, ಚೇತನ್ ಸಾಯಿ ಬಂಧಿತ ಆರೋಪಿಗಳು ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಮಾರ್ಚ್ 6ರಂದು ರಾತ್ರಿ 11 ಗಂಟೆಗೆ ಕಾಮುಕರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ ಇಸ್ರೇಲ್ ಮೂಲದ ಪ್ರವಾಸಿ ಮಹಿಳೆ ಹಾಗೂ ಹೋಂ ಸ್ಟೇ ಮಾಲಕಿ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದರು, ಇದೇ ವೇಳೆ ಹೊರ ರಾಜ್ಯಗಳಿಂದ ಬಂದಿದ್ದ ನಾಲ್ವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು.
ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ಆರೋಪಿಗಾಗಿ ಹುಡುಕಾಟ ನಡೆದಿದೆ.