
ಮಂಗಳೂರು: ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಿಯು ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ನಾಪತ್ತೆಯಾದ 12 ದಿನಗಳ ಬಳಿಕ ವಿದ್ಯಾರ್ಥಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿಯ ಡಿಮಾರ್ಟ್ ಮಾಲ್ ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಫೆ.25ರಂದು ಸಂಜೆ ವ್ಯಾಯಾಮ ಶಾಲೆಗೆ ಹೋಗಿಬರುವುದಾಗಿ ಹೇಳಿ ಹೋದವನು ಏಕಾಏಕಿ ನಾಪತ್ತೆಯಾಗಿದ್ದ. ಎಷ್ಟು ಹುಡುಕಾಡಿದರೂ ಆತನ ಸುಳಿವು ಇರಲಿಲ್ಲ.
ವಿದ್ಯಾರ್ಥಿ ಪತ್ತೆಯಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಫರಂಗಿಪೇಟೆ ರೈಲ್ವೆ ಹಳಿಯಲ್ಲಿ ದಿಗಂತ್ ನ ಚಪ್ಪಲಿ ಹಗೂ ಮೊಬೈಲ್ ಪತ್ತೆಯಾಗಿತ್ತು. ಪತ್ತೆಯಾದ ಒಂದು ಚಪ್ಪಲಿ ಮೇಲೆರಕ್ತದ ಕಲೆ ಇರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಕಾಣೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿ ಡಿ ಮಾರ್ಟ್ ನಲ್ಲಿ ಪತ್ತೆಯಾಗಿದ್ದಾನೆ.