
ಹಾಸನ: ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು. ಸರ್ಕಾರ ಬಲಾದವಣೆಯಾಗದ ನಂತರ ಕಾಂಗ್ರೆಸ್ ಪಕ್ಷದ ಕಡೆ ಹೋಗಿರುವವರ ಕಥೆ ಏನು? ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಯಿತು ಅಂದುಕೊಳ್ಳಿ, ಆಗ ಬಂದು ಹೆಚ್.ಡಿ. ರೇವಣ್ಣನವರಿಗೆ ಜೈ ಅಂತಾರೆ. ಇದೇ ಕಥೆ. ಕೆಲವೇ ತಿಂಗಳಲ್ಲಿ ಸರ್ಕಾರ ಬದಲಾಗುತ್ತೆ ಎಂದು ಹೇಳಿದ್ದಾರೆ.
ಹೆಚ್.ಡಿ. ರೇವಣ್ಣನವರು ಎಲ್ಲಾ ಹಳ್ಳಿಗಳಿಗೂ ರಸ್ತೆ ಮಾಡಿದ್ದಾರೆ. ನಮ್ಮ ಗ್ರಾಮಕ್ಕೆ ಯಾರು ಹಿತ, ಯಾರು ಅಹಿತ ಎಂದು ಯೋಚಿಸಿ, ಶಾಶ್ವತವಾಗಿ ನಿಮ್ಮ ಗ್ರಾಮದ ಕೆಲಸ ಮಾಡಿದವರನ್ನು ನೆನಪಿಸಿಕೊಳ್ಳುತ್ತಿಲ್ಲ. ಯುವಕರೆಲ್ಲರೂ ಒಗ್ಗಟ್ಟಾಗಿ ಒಂದು ಕಡೆ ಇರಬೇಕು ಎಂದು ಹೇಳಿದ್ದಾರೆ.