
ಬೆಂಗಳೂರು: ಕೆಎಎಸ್ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆಯನ್ನು ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರ ನೀಡಿದ್ದಾರೆ.
ಕೆಎಎಸ್ ಮರು ಪರೀಕ್ಷೆಯ ಕನ್ನಡ ಪತ್ರಿಕೆಯಲ್ಲಿಯೂ ಎಡವಟ್ಟುಗಳು ಆಗಿರುವ ಕಾರಣ ಸಾಹಿತಿಗಳು, ಚಿಂತಕರು, ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ನಡೆಯಲು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಲುವೇನು ಎಂದು ಸರ್ಜಿ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರ ನೀಡಿರುವ ಸಿಎಂ, ಕೆಎಎಸ್ ಪೂರ್ವಬಾವಿ ಮರು ಪರೀಕ್ಷೆ ರದ್ದು ಮಾಡಿ ಮತ್ತೆ ಮರು ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಉತ್ತರ ನೀಡಿದ್ದಾರೆ.