
ಸೀತಾಪುರ: ಉತ್ತರ ಪ್ರದೇಶದ ಸೀತಾಪುರದಲ್ಲಿ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರನ ಮೇಲೆ ಶನಿವಾರ ಸೀತಾಪುರದ ಸೀತಾಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಮಾಲಿಯಾ ಸುಲ್ತಾನ್ಪುರ ಪೊಲೀಸ್ ಠಾಣೆ ಪ್ರದೇಶದ ಹೆಂಪುರ್ ರೈಲ್ವೆ ಕ್ರಾಸಿಂಗ್ ಬಳಿಯ ಮೇಲ್ಸೇತುವೆಯಲ್ಲಿ ಈ ಮಾರಕ ದಾಳಿ ನಡೆದಿದೆ.
ಬಾಜ್ ಪೈ(35) ಮಹೋಲಿಯ ನಿವಾಸಿಯಾಗಿದ್ದು, ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಮಹೋಲಿ ತಹಸಿಲ್ನ ಪತ್ರಕರ್ತರಾಗಿದ್ದರು. ಪೊಲೀಸರ ಪ್ರಕಾರ, ಲಕ್ನೋ-ದೆಹಲಿ ರಾಷ್ಟ್ರೀಯ ಹೆದ್ದಾರಿಯ ಹೆಂಪುರ್ ರೈಲ್ವೆ ಕ್ರಾಸಿಂಗ್ ಬಳಿಯ ಸೇತುವೆಯ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ರಾಘವೇಂದ್ರ ಮೇಲೆ ಗುಂಡು ಹಾರಿಸಿದ್ದಾರೆ. ಮೂರು ಗುಂಡುಗಳು ಅವರ ಭುಜ ಮತ್ತು ಎದೆಗೆ ಹೊಡೆದಿವೆ. ಅಪರಾಧ ಮಾಡಿದ ನಂತರ, ದಾಳಿಕೋರರು ಬೈಕ್ನಲ್ಲಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯ ಬಗ್ಗೆ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಗಾಯಗೊಂಡ ಪತ್ರಕರ್ತನನ್ನು ಜಿಲ್ಲಾ ಆಸ್ಪತ್ರೆಗೆ ಪೊಲೀಸರು ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ದಾಳಿಕೋರರನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸೀತಾಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ಪ್ರವೀಣ್ ರಂಜನ್ ಸಿಂಗ್ ಮಾಹಿತಿ ನೀಡಿದ್ದು, ಮೂರು ಗುಂಡುಗಳು ಅವರ ಭುಜ ಮತ್ತು ಎದೆಗೆ ಹೊಕ್ಕಿವೆ. ನಂತರ ಹಲ್ಲೆಕೋರರು ತಮ್ಮ ಮೋಟಾರ್ ಸೈಕಲ್ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸಲು ಜಿಲ್ಲಾ ಗಡಿಗಳನ್ನು ಮುಚ್ಚಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು.