
ಹುಬ್ಬಳ್ಳಿ: ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ ರಚಿಸುವ ಚಿಂತನೆ ಇದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರದ ಕೆ.ಹೆಚ್. ಪಾಟೀಲ್ ಕಾಲೇಜು ಕ್ಯಾಂಪಸ್ ನಲ್ಲಿ ಶನಿವಾರ ವೇಮನ ವಿದ್ಯಾವರ್ಧಕ ಸಂಘದ ಕೆ.ಹೆಚ್. ಪಾಟೀಲ್ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕದಲ್ಲಿ ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ ಮಾಡುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಒಯ್ಯಬೇಕು. ಯಾವುದೇ ವ್ಯಕ್ತಿಗೂ ಕಾನೂನು ಜ್ಞಾನ ಅವಶ್ಯಕ. ಇಂದು ಎಲ್ಲರಿಗೂ ಕಾನೂನು ಶಿಕ್ಷಣ ಅವಶ್ಯಕವಾಗಿದ್ದು, ಇದಕ್ಕಾಗಿ ವಿಶೇಷ ಮಹತ್ವ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಕಾನೂನು ಹೆಚ್ಚಿನ ಮಹತ್ವ ಪ್ರಾಧಾನ್ಯತೆ ಪಡೆಯುತ್ತಿದೆ ಎಂದು ಹೇಳಿದ್ದಾರೆ.