
ಬೆಂಗಳೂರು: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
“ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು.
ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ.
ಭಾರತ ಗೆದ್ದಿದೆ.. ಈ ಸಲ ಕಪ್ ನಮ್ದೆ..” ಎಂದು ಸಿಎಂ ತಿಳಿಸಿದ್ದಾರೆ.
ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು.ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು… pic.twitter.com/mSY5qPQi54
— Siddaramaiah (@siddaramaiah) March 9, 2025