
ಚಿಕ್ಕಬಳ್ಳಾಪುರ: ಒಳ ಮೀಸಲಾತಿ ಜಾರಿಗೆ ನಾವು ಬದ್ಧವಾಗಿದ್ದೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳದ ಶ್ರೀ ರಂಗನಾಥನ ಸನ್ನಿಧಿಯಲ್ಲಿ ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ಭಾನುವಾರ ನಡೆದ 45 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಧು -ವರರನ್ನು ಆಶೀರ್ವದಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಒಳ ಮೀಸಲಾತಿ ಜಾರಿಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಜಾರಿಗೆ ದತ್ತಾಂಶ ಬೇಕಿದ್ದು, ಈ ವಿಚಾರದಲ್ಲಿ ನ್ಯಾ. ನಾಗಮೋಹನದಾಸ್ ಅವರ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ಕೂಡಲೇ ಒಳ ಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೇಳಿದ್ದಾರೆ.
ಒಳ ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿದ್ದು, ಸರ್ಕಾರ ಸಂಪೂರ್ಣವಾಗಿ ಒಳ ಮೀಸಲಾತಿ ಜಾರಿ ಪರವಾಗಿದೆ ಎಂದು ತಿಳಿಸಿದ್ದಾರೆ.