
ಬೆಂಗಳೂರು: ಇಂದು ಸಂಜೆ ಮುಖ್ಯಮಂತ್ರಿ ಸಿದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕ್ಯಾಬಿನೆಟ್ ಗೆ ಜಾತಿಗಣತಿ ತರುವ ನಿಟ್ಟಿನಲ್ಲಿ, ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಚಾರವಾಗಿ ಚರ್ಚಿಸುವ ಸಾಧ್ಯತೆ ಇದೆ.
ಪಕ್ಷದೊಳಗಿನ ಆಂತರಿಕ ಕದನ, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜಟಾಪಟಿ ಸೆರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಗೆ ಬರಲಿವೆ. ಅಲ್ಲದೇ ಬಜೆಟ್ ಅನುಮೋದನೆ, ವಿಧೇಯಕಗಳ ಅಂಗೀಕಾರ, ವಿಪಕ್ಷಗಳನ್ನು ಸದನದಲ್ಲಿ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ತಂತ್ರಗಾರಿಕೆ ಕುರಿತು ಚರ್ಚೆ ನಡೆಯಲಿದೆ.