
ಕೋಲಾರ: ಎಪಿಎಂಸಿ ಮಾರುಕಟ್ಟೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟಬೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಎಪಿಎಂಸಿ ಮಾರುಕಟ್ಟೆಯ ಮೇಲೆ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ. ತೂಕದಲ್ಲಿ ಮೋಸ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಮಾರುಕಟ್ಟೆಯಲ್ಲಿ ಹಳೇ ತೂಕದ ಮಾಪನ ಕಂಡು ಉಪ ಲೋಕಾಯುಕ್ತರು ವ್ಯಾಪಾರಿಗಳ ವಿರುದ್ಧ ಗರಂ ಆದರು. ಮಾರುಕಟ್ಟೆಯಲ್ಲಿ ಪ್ರತಿ ಮಳಿಗೆಗಳಿಗೂ ತೆರಳಿ ಖುದ್ದು ಪರಿಶೀಲನೆ ನಡೆಸಿದರು.