HomeKarnatakaBIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾ.15...

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ https://ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.15 ರಿಂದ ಮಾ.10ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, , ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ [email protected], ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular