HomeKarnatakaರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್: ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ...

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್: ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಶೀಘ್ರ

ಬೆಂಗಳೂರು: ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಶುರುವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

91,000ಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಶುರುವಾಗಲಿದೆ. ಜೊತೆಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಕಾರ್ಡುಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಮನೆಗಳಿಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿದ ಸುಮಾರು 20 ಲಕ್ಷ ಅನರ್ಹರಿದ್ದು, ಪಿಡಿಒ, ಗ್ರಾಮಲೆಕ್ಕಿಗಳಿಂದ ಖುದ್ದು ಪರಿಶೀಲನೆ ನಡೆಯಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular