HomeKarnatakaBIG NEWS : 'ಅನ್ನಭಾಗ್ಯ' ಫಲಾನುಭವಿಗಳಿಗೆ ಗುಡ್ ನ್ಯೂಸ್ : ಮಾರ್ಚ್ ತಿಂಗಳಿನಲ್ಲಿ ಪ್ರತಿ ಸದಸ್ಯರಿಗೆ...

BIG NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಮಾರ್ಚ್ ತಿಂಗಳಿನಲ್ಲಿ ಪ್ರತಿ ಸದಸ್ಯರಿಗೆ 15 ಕೆ.ಜಿ. ಅಕ್ಕಿ ವಿತರಣೆ.!

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ ಮುಖಾಂತರ ಹಣ ಪಾವತಿಸಲಾಗುತ್ತಿರುತ್ತದೆ. ಫೆಬ್ರವರಿ-2025ರ ಮಾಹೆಯಿಂದ ಪ್ರತಿ ಸದಸ್ಯರಿಗೆ ರೂ.170/-ರ ಡಿಬಿಟಿ ಹಣ ಬದಲಾಗಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿರುತ್ತದೆ.

ಮಾರ್ಚ್-2025ರ ಮಾಹೆಯ ಆಹಾರಧಾನ್ಯ ಬಿಡುಗಡೆಯಾಗಿದ್ದು ಹಾಗೂ ಫೆಬ್ರವರಿ-2025ರ ಮಾಹೆಯ ಆಹಾರಧಾನ್ಯ ಸೇರಿ ಮಾರ್ಚ್-2025ರ ಮಾಹೆಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 15 ಕೆ.ಜಿ.ಅಕ್ಕಿ ಹಾಗೂ ಅಂತ್ಯೋದಯ ಎಎವೈ ಪಡಿತರ ಚೀಟಿದಾರರಿಗೆ 01 ರಿಂದ 03 ಸದಸ್ಯರಿಗೆ 35 ಕೆ.ಜಿ.ಅಕ್ಕಿ, 04 ಸದಸ್ಯರಿಗೆ 45 ಕೆ.ಜಿ.ಅಕ್ಕಿ, 05 ಸದಸ್ಯರಿಗೆ 65 ಕೆ.ಜಿ.ಅಕ್ಕಿ, 06 ಸದಸ್ಯರಿಗೆ 85 ಕೆ.ಜಿ.ಅಕ್ಕಿ, 07 ಸದಸ್ಯರಿಗೆ 105 ಕೆ.ಜಿ.ಅಕ್ಕಿ, 08 ಸದಸ್ಯರಿಗೆ 125 ಕೆ.ಜಿ.ಅಕ್ಕಿ, 09 ಸದಸ್ಯರಿಗೆ 145 ಕೆ.ಜಿ.ಅಕ್ಕಿ ಹಾಗೂ 10 ಸದಸ್ಯರಿಗೆ 165 ಕೆ.ಜಿ ಅಕ್ಕಿ ಮುಂದುವರೆದು 10ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular