alex Certify ‘ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಾಗದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸುತ್ತಿರುವುದು ಹಾಸ್ಯಾಸ್ಪದ’ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಾಗದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸುತ್ತಿರುವುದು ಹಾಸ್ಯಾಸ್ಪದ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಾಗದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸುತ್ತಿರುವುದು ಹಾಸ್ಯಾಸ್ಪದ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಎಂದಿಗೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಗದ ಬಿಜೆಪಿಯವರು ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸಲು ಪ್ರಯತ್ನಿಸುತ್ತಿರುವುದು ಹಾಸ್ಯಾಸ್ಪದ.

ಎಲ್ಲಾ ಕಡೆ ತಮ್ಮದೇ ಅಧಿಕಾರ ನಡೆಯುತ್ತಿದೆ ಎಂಬ ಹುಚ್ಚು ಭ್ರಮೆಯಲ್ಲಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾ, ಗುಜರಾತ್ ಎಲ್ಲ ಕಡೆಯೂ ಆಪರೇಷನ್ ಕಮಲದ ಮೂಲಕವೇ ಅಧಿಕಾರ ಹಿಡಿದವರು. ಕರ್ನಾಟಕದಲ್ಲಿ ಅವರ ಪರಿಸ್ಥಿತಿ ಶೋಚನೀಯವಾಗಿದೆ. ನಮ್ಮ ರಾಜ್ಯದಲ್ಲಿಯೇ ಅವರು ಸ್ಥಿತಿ ಅಧೋಗತಿಯಾಗಿದೆ. ಡಬಲ್ ಎಂಜಿನ್ ಸರ್ಕಾರ ಎಂದು ಬೀಗುತ್ತಿದ್ದವರು, ಇಂದು ಸಿಂಗಲ್ ಎಂಜಿನ್ ಕೂಡ ಉಳಿದುಕೊಂಡಿಲ್ಲ. ನಾಯಕತ್ವಕ್ಕಾಗಿ ಅವರೇ ಕಚ್ಚಾಡಿಕೊಂಡು ಪಕ್ಷವನ್ನು ಇಬ್ಭಾಗ ಮಾಡಿಕೊಂಡಿದ್ದಾರೆ.ನೆನಪಿರಲಿ ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಧೂಳೀಪಟವಾಗುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...