ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 2 ಬೈಕ್ ಗಳಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ.
ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಸಾರಿಗೆ ಬಸ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ. ರಾಯಚೂರು ಮೂಲದ ಇಬ್ಬರು , ಆಂದ್ರಪ್ರದೇಶದ ಇಬ್ಬರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ಅಧೋನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ 2 ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.