alex Certify GOOD NEWS : ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸ್ಥಳದಲ್ಲೇ ಸಿಗಲಿದೆ ಚಿಕಿತ್ಸೆ : ‘ವಿಶೇಷ ಆರೋಗ್ಯ ಸೇವೆ’ಗೆ CM ಸಿದ್ದರಾಮಯ್ಯ ಚಾಲನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸ್ಥಳದಲ್ಲೇ ಸಿಗಲಿದೆ ಚಿಕಿತ್ಸೆ : ‘ವಿಶೇಷ ಆರೋಗ್ಯ ಸೇವೆ’ಗೆ CM ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು: ಇನ್ಮುಂದೆ ಕಟ್ಟಡ ಕಾರ್ಮಿಕರಿಗೆ ಅವರು ಕೆಲಸ ಮಾಡುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ, ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಅಂತದ್ದೊಂದು ವಿಶೇಷ ಆರೋಗ್ಯ ಸೇವೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ತೆರಳಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು ಎಂದು ಎಂದರು.

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.

ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಿದ್ದೇವೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.

ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...