
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಡಿಢೀರ್ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಬಿಸಿಲ ಝಳದಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಬಿಸಿಲ ತಾಪ ಕೊಂಚ ಕಡಿಮೆಯಾಗಿತ್ತು. ಸಂಜೆಯಾಗುತ್ತಿದ್ದಂತೆ ಹಲವೆಡೆ ಗಾಳಿ ಮಳೆಯಾಗಿದೆ. ಕೆಆರ್ ಮಾರುಕಟ್ಟೆ, ರಿಚ್ ಮಂಡ್ ಸರ್ಕಲ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು,ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.