
ಪೋರ್ಟ್ ಲೂಯಿಸ್(ಮಾರಿಷಸ್): ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ದಿ ಹಿಂದೂ ಮಹಾಸಾಗರ’ವನ್ನು ನೀಡುವುದಾಗಿ ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಮ್ ಘೋಷಿಸಿದರು.
ಭಾರತ ಮತ್ತು ಮಾರಿಷಸ್ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರ ಕೊಡುಗೆಗಳನ್ನು ಗುರುತಿಸುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇದು ವಿದೇಶಿ ರಾಷ್ಟ್ರದಿಂದ ಪ್ರಧಾನಿ ಮೋದಿಗೆ ನೀಡಲಾಗುವ 21 ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ.
ಈ ವಿಶಿಷ್ಟ ಮನ್ನಣೆಯನ್ನು ಪಡೆದ ಐದನೇ ವಿದೇಶಿ ಪ್ರಜೆ ಮೋದಿ ಎಂದು ರಾಮಗೂಲಮ್ ಹೇಳಿದರು.
ದೇಶದ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿದ್ದಕ್ಕಾಗಿ ಮಾರಿಷಸ್ ಸರ್ಕಾರಕ್ಕೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
ದೇಶದ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿದ್ದಕ್ಕಾಗಿ ಜನರು ಮತ್ತು ಮಾರಿಷಸ್ ಸರ್ಕಾರಕ್ಕೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ. ಈ ನಿರ್ಧಾರವನ್ನು ನಾನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಭಾರತ ಮತ್ತು ಮಾರಿಷಸ್ ನಡುವಿನ ಐತಿಹಾಸಿಕ ಬಾಂಧವ್ಯಕ್ಕೆ ಇದು ಗೌರವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.