
ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮುಂದೂಡುವಂತೆ ಒತ್ತಾಯ ಕೇಳಿ ಬಂದಿದೆ.
ಕ್ರೈಸ್ತರ ಪವಿತ್ರ ದಿನವಾದ ಗುಡ್ ಫ್ರೈಡೇ ಸಂದರ್ಭದಲ್ಲಿ ನಿಗದಿಯಾಗಿರುವ ಸಿಇಟಿ ಪರೀಕ್ಷೆ ಮುಂದೂಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಏಪ್ರಿಲ್ 16, 17 ಮತ್ತು 18ರಂದು ಸಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳು ಕ್ರೈಸ್ತ ಸಮುದಾಯಕ್ಕೆ ಪವಿತ್ರ ದಿನ, ವಾರಗಳು ಆಗಿವೆ. ಹೀಗಾಗಿ ಸಿಇಟಿ ದಿನಾಂಕ ಮುಂದೂಡಿಕೆ ಬಗ್ಗೆ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.