
ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 8 ರಂದು ನಡೆದ 2025 ನೇ ಸಾಲಿನ ಮೊದಲ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 41.81 ಲಕ್ಷ ಪ್ರಕರಣಗಳನ್ನು ಸಂಧಾನದಿಂದ ಇತ್ಯರ್ಥಪಡಿಸಲಾಗಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿರುವ ಹೈಕೋರ್ಟ್ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ತಿಳಿಸಿದ್ದಾರೆ.
ಪರಸ್ಪರ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳುವ ಲೋಕ ಅದಾಲತ್ ನಲ್ಲಿ ಈ ಬಾರಿಯೂ ದಾಖಲೆಯ ಪ್ರಮಾಣದ ಪ್ರಕರಣ ಇತ್ಯರ್ಥಪಡಿಸಲಾಗಿದೆ. ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠದಲ್ಲಿ 5, ಧಾರವಾಡ 4, ಕಲಬುರಗಿಯ 2 ಸೇರಿದಂತೆ ರಾಜ್ಯದಲ್ಲಿ ಒಟ್ಟು 1005 ಪೀಠಗಳು ಏಕಕಾಲಕ್ಕೆ ಕಲಾಪ ನಡೆಸಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.