
ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸಮೀಪ ತಡರಾತ್ರಿ ಅಪಘಾತ ಸಂಭವಿಸಿದೆ.
ಗುಂಟಪಲ್ಲಿ ಕ್ರಾಸ್ ಬಳಿ ಓವರ್ ಟೇಕ್ ಮಾಡಲು ಹೋಗಿ ಸುವರ್ಣಮುಖಿ ಟ್ರಾವೆಲ್ಸ್ ಮತ್ತು ಎ.ಆರ್. ಟ್ರಾವೆಲ್ಸ್ ಬಸ್ ಗಳ ನಡುವೆ ಡಿಕ್ಕಿ ಆಗಿದೆ. ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದು, 15 ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.