
ಬೆಳಗಾವಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯ ಅನುದಾನ ನೀಡಿದ ರಾಜ್ಯ ಸರ್ಕಾರದ ನಡೆ ಖಂಡಿಸಿ ಮಾರ್ಚ್ 18ರಂದು ಕಿತ್ತೂರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಮಂಗಳವಾರ ಚೆನ್ನಮ್ಮನ ಕಿತ್ತೂರಿನಲ್ಲಿ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ವಿವಿಧ ಮಠಾಧೀಶರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾರ್ಚ್ 18ರಂದು ಕಿತ್ತೂರು ಪಟ್ಟಣ ಬಂದ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ನಮ್ಮ ನೆಲ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಎಚ್ಚೆತ್ತುಕೊಂಡು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಮಾರ್ಚ್ 18ರಂದು ಕಿತ್ತೂರು ಪಟ್ಟಣ ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂದು ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ತಿಳಿಸಿದ್ದಾರೆ.