ಬೆಂಗಳೂರು : ‘ಡೆವಿಲ್’ ಶೂಟಿಂಗ್ ನಲ್ಲಿ ಭಾಗಿಯಾಗುವ ಮುನ್ನ ನಟ ದರ್ಶನ್ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ನಟ ದರ್ಶನ್ ಚಾಮುಂಡಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಚಾಮುಂಡಿ ಬೆಟ್ಟದಿಂದ ನೇರವಾಗಿ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸಿದ್ದಾರೆ. ಸರ್ಕಾರಿ ಅತಿಥಿ ಗೃಹಕ್ಕೆ ಶೂಟಿಂಗ್ ನವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಬೌನ್ಸರ್ ಗಳನ್ನು ನಿಯೋಜಿಸಲಾಗಿದೆ.
ಇಂದಿನಿಂದ ಮಾ.14 ರವರೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ಡೆವಿಲ್ ಚಿತ್ರದ ಶೂಟಿಂಗ್ ನಡೆಯಲಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಮತ್ತೆ ಸಿನಿಮಾ ಶೂಟಿಂಗ್ ನಲ್ಲಿ ತೊಡಗಲಿದ್ದಾರೆ. ಶೂಟಿಂಗ್ ಗೆ ನಟ ದರ್ಶನ ಗೆ ಡಿಸಿಪಿ ಮುತ್ತುರಾಜ್ ಅನುಮತಿ ನೀಡಿದ್ದಾರೆ.ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಚಿತ್ರೀಕರಣಕ್ಕೆ ಪ್ಲಾನ್ ಮಾಡಲಾಗಿದೆ. ಮಾರ್ಚ್ 12ರಿಂದ 14ರವರೆಗೆ ಅತಿಥಿಗೃಹದಲ್ಲಿ ಚಿತ್ರೀಕರಣ ನಡೆಯಲಿದೆ. ಮಾರ್ಚ್ 15ರಂದು ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಚಿತ್ರೀಕರಣ ನಡೆಯಲಿದೆ.