
ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ಮಂಜೂರು ಮಾಡುವ ಮನೆಗಳ ನಿರ್ಮಾಣಕ್ಕೆ ಫಲಾನುಭವಿ ಭರಿಸುವ ಹಣವನ್ನು ಸರ್ಕಾರವೇ ಪಾವತಿಸುವ ಕುರಿತಾಗಿ ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಉದ್ದೇಶಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಕೆ.ಎಸ್. ನವೀನ್ ಮತ್ತು ಎಸ್.ವಿ. ಸಂಕನೂರು ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರ ನೀಡಿದ ಸಚಿವರು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 3,62,168 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದ್ದು, ಬಾಕಿ ಇರುವ ಸುಮಾರು 9 ಲಕ್ಷ ಮನೆಗಳನ್ನು ಇನ್ನೊಂದು ವರ್ಷದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ,
ವಿವಿಧ ವಸತಿ ಯೋಜನೆಯಡಿ ಮಂಜೂರು ಮಾಡುವ ಮನೆಗಳ ನಿರ್ಮಾಣಕ್ಕೆ ಫಲಾನುಭವಿ ಭರಿಸುವ ಹಣವನ್ನು ಸರ್ಕಾರವೇ ಪಾವತಿಸುವ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.