ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಮನೆ ಛಿದ್ರ ಛಿದ್ರಗೊಂಡು ಮೂವರಿಗೆ ಗಂಭೀರ ಗಾಯಗಳಾಗಿದೆ.
ಬೆಂಗಳೂರಿನ ಮಹದೇವಪುರದಲ್ಲಿ ಈ ಘಟನೆ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ರಭಸಕ್ಕೆ ಮನೆಯ ಗೋಡೆ ಛಿದ್ರ ಛಿದ್ರ ಆಗಿದ್ದು, ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.