
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣ ವಿರೋಧಿಸಿ ಸ್ಥಳೀಯರು ಹಾಗೂ ಮೀನುಗಾಅರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ವಾಣಿಜ್ಯ ಉದ್ದೇಶಿತ ಬಂದರು ನಿರ್ಮಾಣ ಕೈಬಿಡುವಂತೆ ಆಗ್ರಹಿಸಿ ಮೀನುಗಾರರು ಸಮುದ್ರದಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಕೇಣಿ ಹಾಗೂ ಭಾವಿಕೇರಿ ವ್ಯಾಪಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಬೇಲೆಕೇರಿ ಕಡಲತೀರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೀನುಗಾರಿಕೆ ಹಾಗೂ ಮಾರಾಟ ಸ್ಥಗಿತಗೊಳಿಸಿ ಕಡಲತೀರದಲ್ಲಿ ಸೇರಿದ ಮೀನುಗಾರರು ಮಾನವ ಸರಪಳಿ ರಚಿಸಿ ಸಮುದ್ರಕ್ಕೆ ಇಳಿದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನೂರಾರು ಮೀನುಗಾರರು ಸಮುದ್ರದಲ್ಲಿ ದೋಣಿ,ಬೋಟ್ ಗಳಲ್ಲಿ ತೆರಳಿ ಸಮುದ್ರದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಬಂದರು ನಿರ್ಮಾಣ ಸರ್ವೆ ಕಾರ್ಯದ ವಿರುದ್ಧ ಪ್ರತಿಭಟನೆ ನಡೆಸಿದರು.